ಕರ್ನಾಟಕ ಸರ್ಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆಡಳಿತ ಹಾಗೂ ತಾಲೂಕಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ 'ತಾಲೂಕಾ ಮಟ್ಟದ ಆರೋಗ್ಯ ಮೇಳ' ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಸಸಿಗಳಿಗೆ ನೀರು ಹಾಕುವ ಮೂಲಕ ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಉದ್ಘಾಟಿಸಿದ್ರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಾರ್ವಜನಿಕರಿಗೆ ಉಪಯುಕ್ತವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದಾರೆ. ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಸರ್ಕಾರ ರಿಯಾಯಿತಿ ನೀಡಿದೆ. ಪ್ರತಿಯೊಬ್ಬರು ಈ ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಹೇಳಿದರು. ಗರ್ಭಿಣಿಯರಿಗೆ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿವೆ. ಗರ್ಭಿಣಿಯರು ಯಾವ ಯಾವ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಚಿಕಿತ್ಸೆ ಪಡೆಯಬೇಕೇಂಬ ಮಾಹಿತಿಯು ತಾಯಿ ಕಾರ್ಡ್‌ನಲ್ಲಿ ಇರಲಿದೆ. ಸಂದಿಗ್ದ ಪರಿಸ್ಥಿತಿಯಲ್ಲಿ ಗರ್ಭಿಣಿಯರು ಬಳಸಬಹುದಾದ ಮಾರ್ಗಗಳ ಬಗ್ಗೆ ತಾಯಿ ಕಾರ್ಡ್ ಮಾಹಿತಿಯನ್ನೊಳಗೊಂಡಿದೆ ಎಂದರು. ಈ ಸಂದರ್ಭದಲ್ಲಿ ದೇಹದಾನ ಮಾಡಿದವರಿಗೆ ಹಾಗೂ ನೇತ್ರದಾನ ಮಾಡಿದ ದಾನಿಗಳಿಗೆ ತಾಲೂಕಾಡಳಿತದಿಂದ ಪುರಸ್ಕಾರ ಮಾಡಿದರು. ಈ ಸಂದರ್ಭದಲ್ಲಿ ತಾಲೂಕಾಡಳಿತ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಅನೇಕರು ಇದ್ದರು.
Comments
Post a Comment